- Advertisement -
- Advertisement -




ಉಡುಪಿ : ಮಲ್ಪೆ ಪರಿಸರದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ಕೆಲಸಕ್ಕೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ 9 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದರು.ಇವರನ್ನು ಮಲ್ಪೆ ಪೊಲಿಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಕಲಿ ಪಾಸ್ ಪೋರ್ಟ್ ಬಳಸಿ ದುಬೈಗೆ ತೆರಳಲು ಪ್ರಯತ್ನಿಸಿದ್ದ ಬಾಂಗ್ಲಾ ದೇಶದ ಮುಹಮ್ಮದ್ ಮಾಣಿಕ್ ಎಂಬಾತನನ್ನು ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
- Advertisement -