Saturday, April 27, 2024
spot_imgspot_img
spot_imgspot_img

ಉಡುಪಿ: ಬೈಕಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನ ಬಂಧನ

- Advertisement -G L Acharya panikkar
- Advertisement -

ಉಡುಪಿ: ಅಕ್ರಮವಾಗಿ ಬೈಕಿನಲ್ಲಿ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕೆಳಾರ್ಕಳಬೆಟ್ಟು ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಕೇಶ್(26) ಎಂದು ಗುರುತಿಸಲಾಗಿದೆ.

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಈತನನ್ನು ಪೊಲೀಸರು ಬಂಧಿಸಿ, 44ಸಾವಿರ ರೂ. ಮೌಲ್ಯದ 1 ಕಿಲೋ 102 ಗ್ರಾಂ ತೂಕದ ಗಾಂಜಾ, ಬೈಕ್‌ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಘಟನೆ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!