


ಸಾಲ ಪಡೆದು ವಾಪಸ್ ನೀಡದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಐವರು ವ್ಯಕ್ತಿಗಳು ಸೇರಿಕೊಂಡು ಥಳಿಸಿರುವಂತಹ ಅಮಾನವೀಯ ಕೃತ್ಯ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಪುರ ರಸ್ತೆಯ ಪ್ಲಾಂಟೇಶನ್ನಲ್ಲಿ ಘಟನೆ ನಡೆದಿದೆ.
ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟಿದ್ದ ಐವರನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪ ತಾಲೂಕಿನ ಸೋಮ್ಲಪುರ ರಸ್ತೆಯ ಪ್ಲಾಂಟೇಶನ್ನಲ್ಲಿ ಘಟನೆ ನಡೆದಿದೆ. ಕೊಪ್ಪ ಸಮೀಪದ ಕರ್ಕೇಶ್ವರ ಗ್ರಾಮದ ಸತೀಶ್ ಮೇಲೆ ಹಲ್ಲೆ ಮಾಡಲಾಗಿದೆ. ಮಹೇಶ್, ವಿಠಲ್, ಸಿರಿಲ್, ಸುನೀಲ್ ಮತ್ತು ಮಂಜು ಬಂಧಿತರು. ಸಾಲ ಪಡೆದು ವಾಪಸ್ ನೀಡದ ಯುವಕನಿಗೆ ಈ ಐವರು ಸೇರಿಕೊಂಡು ಥಳಿಸಿದ್ದಾರೆ. ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ ಮದ್ಯಪಾನ ಮಾಡುತ್ತ ಯುವಕನಿಗೆ ಚಿತ್ರಹಿಂಸೆ ನೀಡಿದ್ದಾರೆ. ಜೊತೆಗೆ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಿದ್ದು, ವಿಡಿಯೋ ವೈರಲ್ ಆಗಿತ್ತು. ಗಂಭೀರವಾಗಿ ಗಾಯಗೊಂಡ ಸತೀಶ್ನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಘಟನೆ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂಡ ರಚನೆ ಮಾಡಿದ್ದ ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ಐವರನ್ನು ಬಂಧಿಸಿದ್ದಾರೆ.








