Saturday, June 28, 2025
spot_imgspot_img
spot_imgspot_img

ಕಡಬ : ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಆರೋಪ – ಓರ್ವನ ಬಂಧನ

- Advertisement -
- Advertisement -

ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಘಟನೆ ಕಡಬ ಮರ್ಧಾಳದ ಬದ್ರಿಯಾ ಜುಮಾ ಮಸೀದಿಯ ಆವರಣದಲ್ಲಿ ನಡೆದಿದೆ.

ಬೈಕಿನಲ್ಲಿ ಬಂದ ಯುವಕರಿಬ್ಬರು ಕಡಬ ಮರ್ಧಾಳದ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಂ ಘೋಷಣೆ ಕೂಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡಬ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳು ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ

ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದು, ಸ್ಥಳೀಯ ಬಿಳಿನೆಲೆ ಸೂಡ್ಡು ನಿವಾಸಿ ಕೀರ್ತನ್ ಬಂಧಿತ ಆರೋಪಿ. ಇನ್ನೊರ್ವ ಆರೋಪಿ ಕೈಕಂಬ ನಡೋಟ ನಿವಾಸಿ ಸಚಿನ್ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!