Saturday, May 18, 2024
spot_imgspot_img
spot_imgspot_img

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನ ಬಂಧನ

- Advertisement -G L Acharya panikkar
- Advertisement -

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಶಾಂಕ್(26) ಬಂಧಿತ ಆರೋಪಿ. ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರುವುದು ಬೆಳಕಿಗೆ ಬಂದಿದೆ.

- Advertisement -

Related news

error: Content is protected !!