Saturday, June 28, 2025
spot_imgspot_img
spot_imgspot_img

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ನಡೆದಿದೆ.

ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಗೋವಾ ರಾಜ್ಯದಿಂದ ಖರೀದಿಸಿ ಮಾರಾಟ ಮಾಡುತ್ತಿದ್ದು, 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಗಳನ್ನು ಮಂಗಳೂರಿನ ಸದಕತ್.ಯು ಆಲಿಯಾಸ್ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಆಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ.

ಬಂಧಿತರಿಂದ ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000/- ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳಿಬ್ಬರೂ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಗೋವಾ ರಾಜ್ಯದಿಂದ ಕೋಕೆನ್ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಸದಕತ್.ಯು @ ಶಾನ್ ನವಾಜ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!