Saturday, November 2, 2024
spot_imgspot_img
spot_imgspot_img

ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಸ್ನೇಹಿತರಿಬ್ಬರ ಬಂಧನ; 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಪೊಲೀಸ್ ವಶ..!

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.

ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್​​.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು. ಸಹನಾ ಮತ್ತು ಮೈಕಲ್​ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ​​ನಂತರ, ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್​ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್​​ ಆಗಿದ್ದಾರೆ. ಇಲ್ಲಿ, ಒಂದೇ ಮನೆಯಲ್ಲಿ ವಾಸವಾಗಿದ್ದ ಮೈಕಲ್ ಮತ್ತು ಸಹನಾ, ಇಲ್ಲಿಂದಲೇ ಡ್ರಗ್ಸ್​ ಸರಬರಾಜು ಮಾಡಲು ಆರಂಭಿಸಿದರು.

ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್​ ಪೆಡ್ಲರ್​ನನ್ನು​ ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್​ನ ಬಂಧನಕ್ಕೆ ಬಲೆಬೀಸಿದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಿದರು. ಬಳಿಕ ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್​​​​​, ಎರಡು ಎಲೆಕ್ಟ್ರಾನಿಕ್​ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರುಸ ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!