- Advertisement -
- Advertisement -



ಸುಳ್ಯ: ಗಾಂಜಾ ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 328/2016, ಕಲಂ 8(c) ಜೊತೆಗೆ 20(b) ಎನ್‌ಡಿಪಿಎಸ್ ಕಾಯ್ದೆ ಪ್ರಕರಣ ಹಾಗೂ LPC No: 11/2024 ಸಂಬಂಧ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಪರಾರಿಯಾಗಿದ್ದ ಉತ್ತರ ಪ್ರದೇಶದ ನಸೀಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ರಮೇಶ್ ಎಲ್, ರಾಜು ನಾಯ್ಕ ಡಿ ಹಾಗೂ ಪೊಲೀಸ್ ಕಾನ್ಸ್ಟೇಬಲ್ ವಿಖ್ಯಾತ್ ಜೆ ಗೌಡ ಅವರ ತಂಡವು ಉತ್ತರ ಪ್ರದೇಶದ ಖಾಜಿಪುರದಲ್ಲಿ 20-03-2026 ರಂದು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -








