- Advertisement -
- Advertisement -







ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಸೈಪುಲ್ ಮೊಂಡಲ್ ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ವರ್ಷಗಳ ಹಿಂದೆ ಆರೋಪಿ ರಸ್ತೆ ಬದಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಜೂನ್ 2ರ ಬೆಳಗ್ಗೆ ವಿದ್ಯಾರ್ಥಿನಿ ಟೀ ಕುಡಿಯಲು ಬಂದಿದ್ದಳು. ಟೀ ಕುಡಿದು ಪಿಜಿಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿಯನ್ನು ನೋಡಿದ ಆರೋಪಿ ಆಕೆಯನ್ನು ಎತ್ತಿಕೊಂಡು ಹೋಗಲು ಮುಂದಾಗಿದ್ದಾನೆ. ವಿದ್ಯಾರ್ಥಿನಿ ಗಾಬರಿಯಿಂದ ಕಿರುಚಾಡಿದ್ದು, ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ.
ಘಟನೆಯ ಬಳಿಕ ವಿದ್ಯಾರ್ಥಿನಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
- Advertisement -








