Friday, September 4, 2026
spot_imgspot_img
spot_imgspot_img

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

- Advertisement -
- Advertisement -

ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಅಕ್ರಮ ಸಂಖ್ಯೆ 152/2017, ಭಾರತೀಯ ದಂಡ ಸಂಹಿತೆಯ ಕಲಂ 379 r/w 34 ಅನ್ವಯ ದಾಖಲಾಗಿದ್ದ ಪ್ರಕರಣದ ವಾರೆಂಟ್ ಅಸಾಮಿಯಾದ ಕೇರಳದ ಪಲಕ್ಕಾಡ್ ನಿವಾಸಿ ಶಕೀಲ್ ಪಿ (43) ಬಂಧಿತ ಆರೋಪಿ.

ದಿನಾಂಕ ಮಾರ್ಚ್ 27, 2026ರಂದು ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸಂತೋಷ್ (HC-314) ಮತ್ತು ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ ಮಡ್ಡಿ (PC-2462) ಮಾಹಿತಿ ಸಂಗ್ರಹಿಸಿ ಕೇರಳದ ತಿರೂರ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಎಸಿಜೆ & ಜೆಎಂಎಫ್‌ಸಿ ನ್ಯಾಯಾಲಯ, ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!