Sunday, April 28, 2024
spot_imgspot_img
spot_imgspot_img

ಬಿಜೆಪಿ ಸೇರ್ಪಡೆಯಾದ ಅರುಣ್ ಕುಮಾರ್‌ ಪುತ್ತಿಲ!

- Advertisement -G L Acharya panikkar
- Advertisement -

ಪುತ್ತೂರು: , ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ಪುತ್ತಿಲ ಪರಿವಾರದ ವಿರೋಧ ಶಮನವಾದಂತಾಗಿದೆ. ಇದರ ಬೆನ್ನಲ್ಲೇ ಅಂದರೆ ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪುತ್ತೂರು ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಅವರು ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆದು, ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಯಿತು.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!