Saturday, June 13, 2026
spot_imgspot_img
spot_imgspot_img

ಕೊನೆಗೂ ಮೌನ ಮುರಿದ ಅರುಣ್ ಕುಮಾರ್ ಪುತ್ತಿಲ ; ಪುತ್ತಿಲ ಪರಿವಾರದ ಲೆಟರ್ ಹೆಡ್ಡಿನಲ್ಲೇ ಮಹಿಳೆಯೊಂದಿಗಿನ ವೈರಲ್ ಆಡಿಯೋ ಕುರಿತು ಸ್ಪಷ್ಟನೆ

- Advertisement -
- Advertisement -

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ ಎಂದು ಹೇಳಿದ್ದು, ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತರಗಳನ್ನು ನಡೆಯುವ ಬಗ್ಗೆ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ. ಎಂದು ಹೇಳಿದ್ದಾರೆ.

- Advertisement -

Related news

error: Content is protected !!