ಸಂತ್ರಸ್ತ ಮಹಿಳೆ ಕೂಡ ಅದೇ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ :





ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಈ ಸಂಬಂಧ ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅರುಣ್ ಕುಮಾರ್ ಪುತ್ತಿಲರವರಿಗೆ ರಾಜಕೀಯದಲ್ಲಿ ಬಂದಿರುವ ಕಳಂಕ ನಿವಾರಣೆಗಾಗಿ ಪುತ್ತಿಲ ಹಾಗೂ ಕಾರ್ಯಕರ್ತ ಬಂಧುಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ವಿಶೇಷ ಪ್ರಾರ್ಥನೆ ಮಾಡಲಿದ್ದಾರೆಂದು ಅರಣ್ ಕುಮಾರ್ ಪುತ್ತಿಲ ವಾಟ್ಸಪ್ ಗ್ರೂಪ್‌ಗಳಲ್ಲಿ ವೈರಲ್ ಮಾಡಿದ್ದಾರೆ.
ಅದೇ ಸಮಯದಲ್ಲಿ ಸಂತ್ರಸ್ತ ಮಹಿಳೆ ಕೂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ ಎಂದು ಸಂತ್ರಸ್ತ ಮಹಿಳೆ ವಾಯಿಸ್ ರೆಕಾರ್ಡ್ (ಆಡಿಯೋ) ಮೂಲಕ ಮಾಧ್ಯಮಕ್ಕೆ ತಿಳಿಸಿದ್ದಾರೆ.