Thursday, April 25, 2024
spot_imgspot_img
spot_imgspot_img

ಅಸ್ಸಾಂ: ಅತಿ ಎತ್ತರದ ಮಹಾಮೃತ್ಯುಂಜಯ ದೇಗುಲ ಪ್ರತಿಷ್ಠಾಪನೆಗೆ ಸಜ್ಜು

- Advertisement -G L Acharya panikkar
- Advertisement -

ಅಸ್ಸಾಂ: ಅಸ್ಸಾಂನಲ್ಲಿ ಶಿವಲಿಂಗದ ಆಕಾರದಲ್ಲಿ ನಿರ್ಮಾಣವಾಗಿರುವ 136 ಅಡಿ ಎತ್ತರದ ಮಹಾಮೃತ್ಯುಂಜಯ ದೇವಸ್ಥಾನವು ಉದ್ಘಾಟನೆಗೆ ಸಜ್ಜಾಗಿದೆ. ನಾಗಾಂವ್ ಜಿಲ್ಲೆಯ ಪುರಾಣಿ ಗೋದಾಮ್ ಗ್ರಾಮದಲ್ಲಿರುವ ದೇಗುಲವು ದೇಶದ ಎರಡನೇ ಮಹಾ ಮೃತ್ಯುಂಜಯ ದೇವಸ್ಥಾನ ಎನಿಸಿದೆ.

ಈಗಾಗಲೇ ಮಧ್ಯಪ್ರದೇಶದಲ್ಲಿ ಪ್ರಾಚೀನ ಮಹಾಮೃತ್ಯುಂಜಯ ದೇವಾಲಯ ಇದೆ.ಫೆ. 22ರಿಂದ ಮಾರ್ಚ್ 3ರವರೆಗೆ ಪ್ರತಿಷ್ಠಾಪನಾ ಕೈಂಕರ್ಯಗಳು ನಡೆಯಲಿವೆ. ಫೆ. 27ರಂದು ಮೃತ್ಯುಂಜಯ ದೇವರ ಪ್ರತಿಷ್ಠಾಪನೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪಾಲ್ಗೊಳ್ಳಲಿದ್ದಾರೆ.

ಇದು ವಿಶ್ವದ ಅತಿ ಎತ್ತರದ ಶಿವ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಾಸರಗೋಡಿನ ಗೋಕುಲಂ ಗೋಶಾಲೆಯ ಪೂಚಕ್ಕಾಡು ವಿಷ್ಣು ಪ್ರಸಾದ್ ಹೆಬ್ಬಾರ್ ಅವರು ಹೇಳಿದ್ದಾರೆ. ಹೆಬ್ಬಾರರ ನೇತೃತ್ವದಲ್ಲಿ ಪರಂಪರಾ ವಿದ್ಯಾಪೀಠದ 250 ವೈದಿಕ ವಿದ್ವಾಂಸರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ ಕರ್ನಾಟಕದ 200 ವೈದಿಕರು ಇದ್ದಾರೆ. ಜೊತೆಗೆ ಉತ್ತರ ಭಾರತದ 250 ವೈದಿಕರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!