- Advertisement -
- Advertisement -


ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಥೆ ಅವರಿಗೆ ಹೃದಯಾಘಾತವಾಗಿದ್ದು ಅವರನ್ನು ಶನಿವಾರ ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು India Today ವರದಿ ಮಾಡಿದೆ. 92 ವರ್ಷದ ಆಶಾ ಭೋಸ್ಥೆ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಸ್ತುತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ಹಾನಿ ಅವರ ಪ್ರಕಾರ, ಹೃದಯಾಘಾತದ ನಂತರ ಅವರನ್ನು ತುರ್ತು ವೈದ್ಯಕೀಯ ಸೇವೆಗಳ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








