ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಕೊರೊನಾ ವಾರಿಯರ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಜುಲೈ10ರಿಂದ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಸರ್ಕಾರ ಪದೇ-ಪದೇ ಭರವಸೆಗಳನ್ನು ನೀಡುತ್ತಿದೆ ಹೊರತು ಯಾವುದನ್ನು ಈಡೇರಿಸಿಲ್ಲ. ಹೀಗಾಗಿ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಚಪ್ಪಾಳೆ, ಹೂಮಳೆಗಳ ಗೌರವ ಇರಲಿ. ಅದರೊಂದಿಗೆ ಗೌರತಯುತವಾಗಿ ಬದುಕು ನಡೆಸಲು ಗೌರವ ಧನವೂ ಸಿಗಲಿ ಎಂಬ ಘೋಷವಾಕ್ಯದಡಿಯಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸಲು ಮುಂದಾಗಿದ್ದಾರೆ. ಮಾಸಿಕ ವೇತನ 12 ಸಾವಿರ ರೂ. ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಿದ್ದಾರೆ.
ಈ ಹಿನ್ನಲೆಯಲ್ಲಿ ಜುಲೈ 10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದಾರೆ. ಒಂದುಕಡೆ ಗುತ್ತಿಗೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬಿಸಿ ಸರ್ಕಾರಕ್ಕೆ ತಟ್ಟಲಿದೆ.