Friday, June 26, 2026
spot_imgspot_img
spot_imgspot_img

ಬಂಟ್ವಾಳ: ಆಶಾ ಕಾರ್ಯಕತೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನ!

- Advertisement -
- Advertisement -

ಬಂಟ್ವಾಳ: ಆಶಾ ಕಾರ್ಯಕತೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ನಡೆದಿದೆ.

ಕೊರೊನ ಪಾಸಿಟಿವ್‌ ಬಂದ ವ್ಯಕ್ತಿಯೊಬ್ಬರ ಮನೆಗೆ ಹೋಗಿ ಆರೋಗ್ಯ ವಿಚಾರಿಸಿಕೊಂಡು ಬರುತ್ತಿರುವಾಗ ಸೋಂಕಿತ ಸಂಬಂಧಿಕರಾದ ಸರಪಾಡಿಯ ಸಂದೀಪ್‌ ಮತ್ತು ಸಂತೋಷ ಎಂಬ ವ್ಯಕ್ತಿಗಳು ತಮ್ಮ ಅತ್ತೆಗೆ ಕೊರೊನ ಟೆಸ್ಟ್‌ ಮಾಡಿಸಿ ಪಾಸಿಟಿವ್‌ ಬರಿಸಿದ್ದೇ ನೀನು, ನಿನಗೆ ಪಾಸಿಟಿವ್‌ ಬರಿಸಿದರೆ ಹಣ ಬರುತ್ತದೆ ಎಂದು ಹೇಳಿ, ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

driving
- Advertisement -

Related news

error: Content is protected !!