- Advertisement -
- Advertisement -
ಬಂಟ್ವಾಳ: ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ, ನ್ಯಾಯವಾದಿ, ರಾಜಕೀಯ ಮತ್ತು ಧಾರ್ಮಿಕ ಮುಖಂಡ ಅಶೋಕ್ ಕುಮಾರ್ ಬರಿಮಾರ್ (59) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರು ತಂದೆ, ತಾಯಿ, ಸಹೋದರ ಮತ್ತು ಪುತ್ರಿ ಮತ್ತು ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸಿದ್ದು, ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕಲ್ಲಡ್ಕ ಸಮೀಪ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿದ್ದ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದ ಅವರು, ಶುಕ್ರವಾರ ರಾತ್ರಿ ಬಿ.ಸಿ.ರೋಡಿನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.
- Advertisement -