Monday, June 8, 2026
spot_imgspot_img
spot_imgspot_img

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿ ವಿಟ್ಲಕ್ಕೆ ಭೇಟಿ ನೀಡಿದ ಅಶೋಕ್ ಕುಮಾರ್ ರೈ

- Advertisement -
- Advertisement -

ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಅಶೋಕ್ ಕುಮಾರ್ ರೈ ಮೊದಲ ಬಾರಿಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಳಿಕ ಮಾತನಾಡಿದ ಅವರು ನಾನು ಚುನಾವಣೆಗೆ ನಿಂತ ಸಂದರ್ಭದಲ್ಲೂ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದು ಹೋಗಿರುತ್ತೇನೆ, ಇದೀಗ ದೇವರು ನನ್ನ ಕೈಗೆ ಅಧಿಕಾರ ನೀಡಿದ್ದಾರೆ ಮುಂದೆ ನಡೆಯುವ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಶ್ರೀ ದೇವರ ಆಶೀರ್ವಾದ ಇರಲಿ ಎಂದು ಬೇಡಿಕೊಂಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಮ್ ಕೆ ಬಿ, ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!