- Advertisement -



- Advertisement -
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು,ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಿಂಚಿನ ಪ್ರವಾಸದಲ್ಲಿದ್ದು, ಅಲ್ಲಲ್ಲಿ ಸಭೆಗಳನ್ನು ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ.

ಗಡಿಭಾಗದ ಪಾಣಾಜೆ, ಆರ್ಲಪದವು ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿ ಹಾಗೂ ಮತದಾರರ ಬಳಿ ತೆರಳಿ ಮತಯಾಚನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಮತ್ತು ನಾಡಿನ ಹಿರಿಯರನ್ನು ವೈಯುಕ್ತಿಕವಾಗಿ ಭೇಟಿಯಾಗಿ ಮತಯಾಚನೆ ಮಾಡಿ ಆಶೀರ್ವಾದ ಪಡೆದರು. ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ, ಕಾವು ಹೇಮನಾಥ ಶೆಟ್ಟಿ ಸಹಿತ ಹಲವು ನಾಯಕರು ಹಾಗೂ ಅಭಿಮಾನಿಗಳು, ಪ್ರಮುಖರು ಉಪಸ್ಥಿತರಿದ್ದರು.
- Advertisement -