Saturday, April 27, 2024
spot_imgspot_img
spot_imgspot_img

8ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ

- Advertisement -G L Acharya panikkar
- Advertisement -

ಏಷ್ಯಾಕಪ್ 2023 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿತು. ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಆ ಬಳಿಕ 4ನೇ ಓವರ್​ನಲ್ಲಿ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಬಳಿಸಿದರು. ಇದರ ಬೆನ್ನಲ್ಲೇ ಮತ್ತೆರಡು ವಿಕೆಟ್ ಉರುಳಿಸಿ ಸಿರಾಜ್ ಐದು ವಿಕೆಟ್​ಗಳ ಸಾಧನೆ ಮಾಡಿದರು. ಇನ್ನು ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು. ಇದರೊಂದಿಗೆ ಶ್ರೀಲಂಕಾ ತಂಡವು 15.2 ಓವರ್​ಗಳಲ್ಲಿ 50 ರನ್​ಗಳಿಗೆ ಆಲೌಟ್ ಆಯಿತು.

ಕೇವಲ 51 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾಗೆ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ 4 ಓವರ್​ಗಳಲ್ಲೇ 34 ರನ್ ಚಚ್ಚಿದ ಈ ಜೋಡಿ ಪವರ್​ಪ್ಲೇನಲ್ಲೇ ತಂಡಕ್ಕೆ ಗೆಲುವು ತಂದುಕೊಡುವ ಕಾಯಕಕ್ಕೆ ಕೈಹಾಕಿದರು. ಅಂತಿಮವಾಗಿ 6.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಟೀಮ್ ಇಂಡಿಯಾ 10 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 8ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.

- Advertisement -

Related news

error: Content is protected !!