Monday, June 15, 2026
spot_imgspot_img
spot_imgspot_img

ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್‌..!

- Advertisement -
- Advertisement -

ಬೆಂಗಳೂರು: ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್ ಎಂದು ತಿಳಿಸಿದ್ದಾರೆ.

ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನು ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್‌ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

A1 ಆರೋಪಿ ಫರ್ಮಾನ್, A2 ಸಮೀರ್ ಹಾಗೂ ಇಬ್ಬರು ಅಪ್ರಾಪ್ತರ ಬಂಧನವಾಗಿದೆ. ತಡರಾತ್ರಿವರೆಗೂ ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿಯೇ ಪೊಲೀಸರು ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ.

- Advertisement -

Related news

error: Content is protected !!