Saturday, June 6, 2026
spot_imgspot_img
spot_imgspot_img

ವಿಟ್ಲ: ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನ; ದೂರು ದಾಖಲು

- Advertisement -
- Advertisement -

ವಿಟ್ಲ: ಕ್ಷುಲ್ಲಕ ಕಾರಣಕ್ಕೆ ಮನೆಗೆ ಅಕ್ರಮ ಪ್ರವೇಶ ಮಾಡಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಈ ಪ್ರಕರಣ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಕಂಬಳಬೆಟ್ಟು ಎಂಬಲ್ಲಿ ಬದ್ರಿಯಾ ಕಾಂಪ್ಲೆಕ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸ ಮಾಡಿಕೊಂಡಿದ್ದ ಅಬ್ದುಲ್ ಜಲೀಲ್ ಅವರ ಪತ್ನಿ ಹನ್ನತ್‌ ಬಾನು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆರೆಮನೆಯ ಮುಬಿನಾ ಮತ್ತು ಆಕೆಯ ಸಹೋದರ ಮುನಾಸ್‌ ಹಲ್ಲೆ ನಡೆಸಿದ ಆರೋಪಿಗಳು.

ಅಬ್ದುಲ್ ಜಲೀಲ್ ಮನೆಗೆ ಆರೋಪಿಗಳಾದ ಮುಬಿನಾ ಮತ್ತು ಆಕೆಯ ಸಹೋದರ ಮುನಾಸ್‌ ಅಕ್ರಮ ಪ್ರವೇಶ ಮಾಡಿ ಹನ್ನತ್‌ ಬಾನು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿ ಜೀವಬೆದರಿಕೆಯೊಡ್ಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಪತಿ ನೀಡಿದೆ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!