


ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ.ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ ಕೆಲಸ ಮಾಡಿಕೊಂಡಿದ್ದ ಎಂಬವರು ಫೆ.20ರಂದು ಬೆಳಗಿನ ಜಾವ ಬಂದರಿಗೆ ಕೆಲಸಕ್ಕೆ ಹೋಗಿದ್ದರು.
ಅಲ್ಲಿ ಅವರು ಬೆಳಗ್ಗೆ 4.30ರ ಸುಮಾರಿಗೆ ಕಚೇರಿಯ ಶೌಚಾಲಯಕ್ಕೆ ಹೋಗಿ ವಾಪಾಸು ಬಂದರು ಕಡೆಗೆ ಬರುತ್ತಿದ್ದರು. ಆಗ ಅಪರಿಚಿತ ವ್ಯಕ್ತಿಯೊಬ್ಬ ದಯಾನಂದ ಕುಂದರ್ ಅವರಲ್ಲಿ ಮೀನಿನ ಬಗ್ಗೆ ವಿಚಾರಿಸುವ ನೆಪದಲ್ಲಿ ಹತ್ತಿರ ಬಂದು, ಮುಖಕ್ಕೆ ಖಾರದ ಪುಡಿಯಲ್ಲಿ ಎರಚಿದನು. ಬಳಿಕ ಅವರನ್ನು ಅಲ್ಲೇ ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದ್ದು ನಂತರ ಅಲ್ಲಿದ್ದ ಇಬ್ಬರು ಅಪರಿಚಿತರು ಒಟ್ಟು ಸೇರಿ ದಯಾನಂದ ಕುಂದರ್ ಅವರಿಗೆ ಚಾಕು ತೋರಿಸಿ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕೊಡು ವಂತೆ ಕೇಳಿದರು. ಕೊಡದೆ ಇದ್ದಾಗ ಆರೋಪಿ ಮುತ್ತಣ್ಣ ಮತ್ತು ಇಬ್ಬರು ಅಪರಿಚಿತರು ಸೇರಿ ದಯಾನಂದ ಕುಂದರ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಕೈಯಿಂದ ಹಲ್ಲೆ ಮಾಡಿ 6ಲಕ್ಷ ರೂ. ಮೌಲ್ಯದ ಸುಮಾರು 6 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದರು.
ಅಲ್ಲದೆ ಘಟನೆಯ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಂದು ಬಿಡುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







