Friday, May 3, 2024
spot_imgspot_img
spot_imgspot_img

ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನು ಒಳಗೊಂಡ0ತೆ ಪ್ರಸ್ತುತ ಈ ಕೆಳಗಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಪಾರದರ್ಶಕವಾಗಿ ಮೆರಿಟ್ ಆಧಾರಿತ ಪರೀಕ್ಷೆ ಪ್ರಕ್ರಿಯೆ ನಡೆಯಲಿರುವುದಾಗಿ ಅಧಿಸೂಚನೆ ಹೇಳಿದೆ. ಈ ಹುದ್ದೆಗಳಲ್ಲಿ ಶೇಕಡ.95 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಶೇಕಡ.5 ರಷ್ಟು ಇಲಾಖೆಯ ಗ್ರೂಪ್ ಸಿ ವೃಂದದಿಂದ ನೇರ ನೇಮಕಾತಿ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.

ವಿದ್ಯಾರ್ಹತೆ
ಖಾಲಿ ಹುದ್ದೆಯ ವಿಷಯಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಪದವಿ ಜತೆಗೆ NET, KSET, PhD ಉತ್ತೀರ್ಣರಾಗಿರಬೇಕು.

ನೇಮಕಾತಿ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ (ನೇರ ಮತ್ತು ಸಮತಳ) ಮತ್ತು ರೋಸ್ಟರ್ ಬಿಂದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 1
ಕೊನೆಯ ದಿನ: ಅಕ್ಟೋಬರ್ 30
ಪರೀಕ್ಷೆ ನಡೆಯುವ ಸಂಭವನೀಯ ದಿನಾಂಕ: 2021ರ ಡಿಸೆಂಬರ್
ವೇತನ ಶ್ರೇಣಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ ರೂ.57700-1,82,400 ವರೆಗೆ ಇರುತ್ತದೆ.

ಹೆಚ್ಚಿನ ಮಾಹಿತಿಗೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ವಿಳಾಸ ನೋಡಿ:
https://cetonline.karnataka.gov.in/kea/Assprof

- Advertisement -

Related news

error: Content is protected !!