Sunday, August 16, 2026
spot_imgspot_img
spot_imgspot_img

ಮಾಣಿ ವಲಯ ಬಂಟರ ಸಂಘ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ

- Advertisement -
- Advertisement -

ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಾಧವ ರೈ ಅಮೈ ಬಂಡಸಾಲೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷೆ ಪ್ರಫುಲ್ಲ ಆರ್. ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾತನಾಡಿ ’ಆಟಿ ತಿಂಗಳ ವಿಶೇಷ ಆಚರಣೆಯಿಂದ ಯುವ ಪೀಳಿಗೆಗೆ ತುಳುನಾಡಿನ ಪುರಾತನವಾದ ಸಂಸ್ಕಾರ ಸಂಸ್ಕೃತಿಯ ಅರಿವು ಮೂಡಿಸಲು ಸಾಧ್ಯವಿದೆ ತುಳುನಾಡಿನ ಇತಿಹಾಸದ ಬಗ್ಗೆ, ಮುಂದಿನ ಜನಾಂಗಕ್ಕೆ ತಿಳಿಯ ಪಡಿಸುವ ಅಗತ್ಯವಿದೆ’ ಎಂದು ಹೇಳಿದರು.

ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ, ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಮಾತನಾಡಿ ’ಆಟಿ ತಿಂಗಳ ವೈಶಿಷ್ಟ್ಯತೆ, ಸಮಾಜ ಬಾಂಧವರ ಒಗ್ಗೂಡಿಸುವಿಕೆಯ ಅಗತ್ಯತೆ ಮತ್ತು ಮಕ್ಕಳಿಗೆ ನಾವು ಕಲಿಸಬೇಕಾದ ನಮ್ಮ ಜೀವನ ಪದ್ದತಿಯ ಬಗ್ಗೆತಿಳಿಯಪಡಿಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಪ್ರಹಾದ ಶೆಟ್ಟಿ ಜಡ್ರಿಲ, ಬಂಟ್ವಾಳ ತಾಲೂಕು ಬಂಟರ ಸಂಘದ ಸ್ಥಾಪಕಾಧ್ಯಕ್ಷ ಕಿರಣ್ ಹೆಗ್ಡೆ, ಆನಂತಾಡಿ. ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕಿ ಪ್ರೇಮಲತಾ ಜೆ. ರೈ, ಪ್ರಾಧ್ಯಾಪಕ ತಾರನಾಥ ಶೆಟ್ಟಿ ಹಿರ್ತಂದಬೈಲು, ಯುವ ಚಲನಚಿತ್ರ ಕು. ವೆನ್ಯ ರೈ, ಶೈಕ್ಷಣಿಕ ಸಾಧಕಿ ಕು. ದೀಕ್ಷಾ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಲಯದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಮಾಜದ ಮಹಿಳೆಯರು ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಮಾಜ ಬಾಂಧವರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು ಸಂಘದ ನಿಕಟಪೂರ್ವಾಧ್ಯಕ್ಷ ಗಂಗಾಧರ ರೈ ವಡ್ಯದಗಯ, ಗೌರವ ಸಲಹೆಗಾರ ಬಾಲಕೃಷ್ಣ ಆಳ್ವ ಕೊಡಾಜೆ, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಪೂರ್ವಾಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪ್ರವೀಣ್ ರೈ ಕಲಾಣಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಘದ ಉಪಾಧ್ಯಕ್ಷ ಗಂಗಾಧರ ಆಳ್ವ ಅನಂತಾಡಿ ಸ್ವಾಗತಿಸಿದರು. ಕಾರ್ಯದರ್ಶಿ ನಿರಂಜನ ರೈ ಕುರ್ಲೆತ್ತಿಮಾರು ಧನ್ಯವಾದ ಸಮರ್ಪಿಸಿದರು. ವಿಜಯಲಕ್ಷ್ಮಿ ವಿ.ಶೆಟ್ಟಿ, ವಿಂಧ್ಯಾ ಎಸ್. ರೈ ಮಲ್ಲಿಕಾ.ಎ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಆಟಿ ತಿಂಗಳ ವಿಶಿಷ್ಟ ಖಾದ್ಯಗಳೊಂದಿಗೆ ಬೋಜನ ನಡೆಯಿತು. ವಿಶೇಷ ಖಾದ್ಯಗಳನ್ನು ತಯಾರಿಸಿದ ಸಮಾಜದ ಮಹಿಳೆಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

- Advertisement -

Related news

error: Content is protected !!