Monday, June 30, 2025
spot_imgspot_img
spot_imgspot_img

ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ

- Advertisement -
- Advertisement -

ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಮಾರ್ಲೆನಾ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳಿಂದ ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದು ನಿಂತು ಅದನ್ನು ಒಪ್ಪಿಕೊಂಡರು. ಒಟ್ಟಾರೆ ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!