Friday, April 26, 2024
spot_imgspot_img
spot_imgspot_img

ಮಂಗಳೂರು: ಎಟಿಎಂಗೆ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದವರನ್ನು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದಿದ್ದ ಎಟಿಎಂ ಯಂತ್ರಗಳ ಸರಣಿ ಸ್ಕಿಮ್ಮಿಂಗ್ ಹಗರಣಕ್ಕೆ ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳಾದೇವಿಯಲ್ಲಿರುವ ಎಸ್​ಬಿಐ ಎಟಿಎಂ ನಲ್ಲಿ ಇವರು ಸ್ಕಿಮ್ಮಿಂಗ್ ಯಂತ್ರ ಅಳವಡಿಕೆ ಮಾಡುತ್ತಿದ್ದರು. ಅನುಮಾನಗೊಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿ ಆರೋಪಿಯನ್ನು ಹಿಡಿದರು ಆಗ ಆರೋಪಿಗಳು ಓಡಿಹೋಗಿ ತಪ್ಪಿಸಲು ಯತ್ನಿಸಿದರು. ಓಡಿ ಹೋಗಿದ್ದ ಆರೋಪಿಗಳನ್ನು ಸ್ಥಳೀಯರು ಪ್ರಯತ್ನ ಪಟ್ಟು ಹಿಡಿದರು. ಅವರ ಕೈಗೆ ಸಿಕ್ಕಿಬಿದ್ದ ಸಂದರ್ಭದ ಕುರಿತ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

ಘಟನೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಹರಿರಾಮ್ ಶಂಕರ್ ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎಂಬುದನ್ನು ದೃಢಪಡಿಸಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆ ಎಟಿಎಂ ಯಂತ್ರಗಳಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸಿ ಎಟಿಎಂನ್ನು ದುರುಪಯೋಗ ಪಡಿಸಲಾಗಿದೆ. ಈ ಮೂಲಕ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೋಚಲಾಗಿದೆ.

- Advertisement -

Related news

error: Content is protected !!