Sunday, May 19, 2024
spot_imgspot_img
spot_imgspot_img

ಭ್ರೂಣಹತ್ಯೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ದಾಳಿ; ದಂಪತಿ ಅರೆಸ್ಟ್..!

- Advertisement -G L Acharya panikkar
- Advertisement -

ಮಂಡ್ಯ: ಭ್ರೂಣಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಆನಂದ್ ಹಾಗೂ ಅಶ್ವಿನಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮತ್ತೋರ್ವ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಆನಂದ್ ಅಂಬುಲೆನ್ಸ್ ಡ್ರೈವರ್ ಆಗಿದ್ದು, ಅಶ್ವಿನಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ನೌಕರರಾಗಿದ್ದಾರೆ. ಆನಂದ್‍ಗೆ ಪಾಂಡವಪುರದಲ್ಲಿ ಅಲರ್ಟ್ ಆಗಿದ್ದ ಸರ್ಕಾರಿ ಕ್ವಾಟರ್ಸ್‍ನಲ್ಲಿ ಆರೋಪಿಗಳು ಭ್ರೂಣಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರಿಂದ ಜಂಟಿ ಕಾರ್ಯಾಚರಣೆ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಡಿಹೆಚ್‍ಒ ಡಾ.ಮೋಹನ್, ಟಿಹೆಚ್‍ಒ ಡಾ.ಅರವಿಂದ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮಹಿಳೆಯೋರ್ವರನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

- Advertisement -

Related news

error: Content is protected !!