- Advertisement -
- Advertisement -



ರಾಮನಗರ: ಮನೆ ಪಕ್ಕ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಕೆಲವರು ಸೇರಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟ ಘಟನೆ ಬಿಡದಿಯಲ್ಲಿ ನಡೆದಿದೆ.

ಮೃತರನ್ನು ರಾಜಸ್ಥಾನ ಮೂಲದ ವಿನೋದ್(34) ಎಂದು ಗುರುತಿಸಲಾಗಿದೆ.
ಬಿಡದಿಯ ಖಾಸಗಿ ಕಂಪನಿಯೊಂದರಲ್ಲಿ ವಿನೋದ್ ಅವರು ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಯ ಮುಂದೆ ನಿಂತು ವಿನೋದ್ ಅವರು ಕೆಮ್ಮಿದರು ಎಂಬ ಕಾರಣಕ್ಕೆ ಆರೋಪಿಗಳಾದ ಸ್ಥಳೀಯ ನಿವಾಸಿಗಳಾದ ಹೊಂಬಯ್ಯ, ವಿಜಯ್ ಸೇರಿದಂತೆ ಇನ್ನಿತರರು ಅವರ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ವಿನೋದ್ ಅವರ ತಲೆಗೂ ಬಲವಾದ ಏಟು ಬಿದ್ದಿದ್ದು, ಅವರನ್ನು ತಕ್ಷಣವೇ ಬಿಡದಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿರುವ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -







