


ಮೈಸೂರು: ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್ಮೇಲ್ ಮಾಡುವ ಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸ್ಟಿಂಗ್ ಪ್ರಕರಣದ ಬಗ್ಗೆ ಮಾತನಾಡಿದ ಯತೀಂದ್ರ, ಸ್ಟಿಂಗ್ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಆಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಅಂದರೆ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ಸಿದ್ದರಾಮಯ್ಯರಿಗೆ ಬ್ಲ್ಯಾಕ್ಮೇಲ್ ಮಾಡುವ ಯತ್ನ ನಡೆದಿದೆ. ಸಿದ್ದರಾಮಯ್ಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನಲ್ಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್ಮೇಲ್ ಮಾಡುವ ಪ್ರಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದು, ಕಾಂಗ್ರೆಸ್ನ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು ಎಂದು ಹೇಳಿದರು.
ಸ್ಟಿಂಗ್ ಮಾಡಿ ಟಿಕೆಟ್ಗೆ ಬ್ಲ್ಯಾಕ್ಮೇಲೆ ಮಾಡಲು ಯತ್ನಿಸಿದ್ದಾರೆ. ತಂದೆ ಬೇಜಾರಿಗಿದ್ದಾರೆ. 40 ವರ್ಷ ಕಳಂಕ ಇಲ್ಲದೇ ರಾಜಕಾರಣ ಮಾಡಿದ್ದಾರೆ. ಸತ್ಯ ನಮ್ಮ ಕಡೆ ಇದೆ. ಸತ್ಯ ಹೊರಗೆ ಬರುತ್ತೆ ಎಂದು ಅವರು ಹೇಳಿರುವುದಾಗಿ ತಿಳಿದುಬಂದಿದೆ.








