- Advertisement -
- Advertisement -



ಬೆಳ್ತಂಗಡಿ:ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09 ರಂದು ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಸ್ಕೂಟಿಯಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಮಾರುತಿ ಓಮ್ನಿ ವಾಹನದಲ್ಲಿ ಬಂದ ಮುಖ ಮುಚ್ಚಿಕೊಂಡಿದ್ದ ಮೂವರು ಅಪರಿಚಿತ ವ್ಯಕ್ತಿಗಳು ಅವಳನ್ನು ತಡೆದು ಅಪಹರಣೆಗೆ ಪ್ರಯತ್ನಿಸಿದ್ದಾರೆ .
ಬಾಲಕಿ ತೀವ್ರವಾಗಿ ಪ್ರತಿರೋಧ ವ್ಯಕ್ತಪಡಿಸಿದಾಗ, ಆರೋಪಿಗಳು ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ. ಗಾಯಗಳು ಮೇಲ್ಮೈಯಾಗಿದ್ದು, ಹೊಲಿಗೆ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಬಾಲಕಿ ತನ್ನ ಪೋಷಕರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.
- Advertisement -








