Sunday, June 14, 2026
spot_imgspot_img
spot_imgspot_img

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!

- Advertisement -
- Advertisement -

ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

- Advertisement -

Related news

error: Content is protected !!