Saturday, June 6, 2026
spot_imgspot_img
spot_imgspot_img

ಆತೂರು: ವಾಹನ ತಪಾಸಣೆ ವೇಳೆ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು!

- Advertisement -
- Advertisement -

ಕಡಬ: ವಾಹನ ತಪಾಸಣೆ ವೇಳೆ ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತಪಟ್ಟ ವ್ಯಕ್ತಿ ಆತೂರು ಬೈಲು ನಿವಾಸಿ ಹಾರಿಸ್(33) .ಅವರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರ ವಾಹನವನ್ನು ತಡೆದಿದ್ದಾರೆ. ಈ ವೇಳೆ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಿರುದ್ಧ ದಿಕ್ಕಿನಲ್ಲಿದ್ದ ಪೊಲೀಸರತ್ತ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಅವರಿಗೆ ಢಿಕ್ಕಿ ಹೊಡೆದಿದೆ ಇದರಿಂದ ಗಂಭೀರ ಗಾಯಗೊಂಡ ಹಾರಿಸ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ‌ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!