- Advertisement -
- Advertisement -
ಬೆಂಗಳೂರು : ಶಿಕ್ಷಕರ ವರ್ಗಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಿತ್ತು. ಈ ಬಳಿಕ ಶಿಕ್ಷಕರ ವರ್ಗಾವಣೆಗೆ ಜಾಲನೆ ನೀಡಿರುವ ರಾಜ್ಯ ಸರ್ಕಾರ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಸಿದ್ಧಗೊಳಿಸಿ, ಪ್ರಕಟಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಈ ಕುರಿತು ಮಾಹಿತಿ ನೀಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಕರ ವರ್ಗಾವಣೆಯ ಸಂಬಂಧ ನಿಯಮಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿ. ಈ ಕಾಯ್ದೆಗೆ ಈಗಾಗಲೇ ಅಧಿವೇಶನದಲ್ಲೂ ಅನುಮೋದನೆ ದೊರೆತಿದೆ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂಬುದಾಗಿ ಇಂದು ನಡೆದಂತ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದ್ದೇನೆ. ಶಿಕ್ಷಕ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯ ಮೂಲಕ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
- Advertisement -