Wednesday, November 4, 2026
spot_imgspot_img
spot_imgspot_img

ವೇಣೂರು ಸಮೀಪ ಆಟೋರಿಕ್ಷಾ-ಬೈಕ್ ಡಿಕ್ಕಿ: ಸವಾರ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಆಟೋರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನ.3ರಂದು ಸಂಜೆ ನಡೆದಿದೆ.

ವೇಣೂರಿನಲ್ಲಿ ಚಿನ್ನದ ಮಳಿಗೆಯ ಶಾಖಾ ವ್ಯವಸ್ಥಾಪಕನಾಗಿ ಉದ್ಯೋಗದಲ್ಲಿದ್ದ ಪೆರಾಡಿ ಗ್ರಾಮದ ಸ್ವಸ್ತಿಕ್(26) ಮೃತ ಯುವಕ.

ಸ್ವಸ್ತಿಕ್ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆ ಕರೆದೊಯ್ದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಸ್ವಸ್ತಿಕ್ ತಾಯಿ ಹಾಗೂ ಇಬ್ಬರು ಸಹೋದರಿಯನ್ನು ಅಗಲಿದ್ದಾರೆ.

ಘಟನೆ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!