




ಪುತ್ತೂರು: ನಗರದ ಏಳುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್ ಕೆಡೆಂಜಿ ಹಾಗೂ ವಸಂತ ವೀರಮಂಗಲ ಅವರು ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ಸುಕ್ಷೇತ್ರ ಸಿದ್ದನಕೊಳ್ಳ ನಿರಂತರ ದಾಸೋಹ ಹಾಗೂ ಕಲಾ ಪೋಷಕರ ಮಠದ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.








