Saturday, June 28, 2025
spot_imgspot_img
spot_imgspot_img

ಆಕ್ಸಿಯಂ-4 ಉಡಾವಣೆ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷಯಾನ ಶುರು..!

- Advertisement -
- Advertisement -

ನವದೆಹಲಿ: ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.

ತಾಂತ್ರಿಕ ತೊಂದರೆಗಳ ಕಾರಣದಿಂದಾಗಿ ಆಕ್ಸಿಯಮ್ 4 ಮಿಷನ್ ಉಡಾವಣೆ ವಿಳಂಬವಾಗಿತ್ತು. ಇದೀಗ ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್ ಮೂಲಗಳು ಖಚಿತಪಡಿಸಿದ್ದವು.

ಅದರಂತೆ ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಪ್ರಯಾಣ ಬೆಳೆಸಿದೆ.

ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಜೊತೆಗೆ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ನಡೆಸಲಿದ್ದಾರೆ.

- Advertisement -

Related news

error: Content is protected !!