ಲಖನೌ:ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತೆಗಳು ಅಯೋಧ್ಯೆಯ ಉದ್ದಗಲಕ್ಕೂ ನಡೆಯುತ್ತಿವೆ. ಆ.05 ರಂದು ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣತಯಾರಿ ನಡೆಯುತ್ತಿದ್ದಂತೆಯೇ ಆ ದಿನದ ನೆನಪಿಗಾಗಿ ಸಂಭ್ರಮಾಚರಣೆಗೂ ದೇಶ-ವಿದೇಶಗಳಲ್ಲಿ ಸಿದ್ಧತೆ ನಡೆದಿದೆ.
ರಾತ್ರಿ ಹೊತ್ತು ಅಯೋಧ್ಯೆ ಕಂಗೊಳಿಸುತ್ತಿರುವ ರೀತಿ ಇದು.
#WATCH Several parts of Ayodhya illuminated, ahead of foundation stone laying ceremony of Ram Temple.
— ANI UP (@ANINewsUP) August 1, 2020
Prime Minister Narendra Modi will lay the foundation stone of Ram Temple on 5th August. pic.twitter.com/G8eHNSj2NX
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಆದಿತ್ಯನಾಥ ಕಳೆದ ವಾರವೂ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದರು. ಕಟ್ಟೆಚ್ಚರ ವಹಿಸುವಂತೆ ಸಿಎಂ ಆದಿತ್ಯನಾಥ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ರಾಮಮಂದಿರದ ಭೂಮಿಪೂಜೆಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದೂರವಾಣಿ ಮೂಲಕ ಆಹ್ವಾನಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಾಜಿ ಸಿಎಂಗಳಾದ ಕಲ್ಯಾಣ್ ಸಿಂಗ್, ಉಮಾ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಮುಖರು.