Friday, May 3, 2024
spot_imgspot_img
spot_imgspot_img

ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ

- Advertisement -G L Acharya panikkar
- Advertisement -

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಈ ಬಾರಿಯ ದೀಪಾವಳಿಗೆ ಹೊಸ ದಾಖಲೆ ಸೃಷ್ಟಿಸಲು ತಯಾರಿ ನಡೆದಿದೆ. ಈ ಬಾರಿಯ ದೀಪಾವಳಿಗೆ 24 ಲಕ್ಷ ಹಣತೆಗಳನ್ನು ಹಚ್ಚಲು ಸರ್ಕಾರ ತಿರ್ಮಾನಿಸಿದ್ದು, ದೀಪೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಒಟ್ಟು 51 ಘಾಟ್‌ಗಳಲ್ಲಿ 24 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಹಚ್ಚಲಾಗುತ್ತದೆ.

ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ಸಂಭ್ರಮಾಚರಣೆಯಲ್ಲಿ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು. ರಾಮಾಯಣವನ್ನು ಆಧರಿಸಿದ ಹದಿನಾರು ಕೋಷ್ಟಕಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು. ನಗರದಲ್ಲಿ ಶ್ರೀರಾಮನ ಜೀವನಗಾಥೆಯನ್ನು ಬಿಂಬಿಸುವ ಮರಳು ಕಲೆಯನ್ನೂ ಮಾಡಲಾಗಿದೆ. 2017ರಿಂದ ರಾಮಮಂದಿರ ಪ್ರದೇಶದಲ್ಲಿ ಉತ್ಸವವನ್ನು ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆಯನ್ನು ಸೃಷ್ಟಿಸುತ್ತಿದೆ. ಈ ಬಾರಿಯ ದೀಪೋತ್ಸವದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. 50 ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದ್ದಾರೆ.

2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಬರೆಯಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಆಚರಣೆಯ ಸಮಯದಲ್ಲಿ ಸೂಕ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಅಯೋಧ್ಯೆಯನ್ನು 14 ಪೊಲೀಸ್ ವಲಯಗಳಾಗಿ ವಿಂಗಡಿಸಿದ್ದೇವೆ ಎಂದು ಅಯೋಧ್ಯೆ ರೇಂಜ್ ಐಜಿ ಪ್ರವೀಣ್ ಕುಮಾರ್ ಹೇಳಿದರು. ಭದ್ರತಾ ಸಿದ್ಧತೆಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಹ ಬಳಸಲಾಗಿದೆ. ರಾಮ್ ಕಿ ಪೈಡಿಯಲ್ಲಿರುವ ವಿವಿಐಪಿ ಆವರಣವನ್ನು ಶ್ವಾನದಳದೊಂದಿಗೆ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

- Advertisement -

Related news

error: Content is protected !!