Sunday, May 5, 2024
spot_imgspot_img
spot_imgspot_img

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ಇಬ್ಬರು ಮೃತ್ಯು..!

- Advertisement -G L Acharya panikkar
- Advertisement -

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗುತ್ತಿದ್ದ ಮಾಲಾಧಾರಿಗಳ ಕಾರು ಭೀಕರವಾಗಿ ಅಪಘಾತಕ್ಕಿಡಾಗಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಚೆನ್ನು ಪಾಟೀಲ (26), ಯುವರಾಜ (28) ಎಂದು ಗುರುತಿಸಲಾಗಿದೆ.

ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದರು. ಆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಮಂಜು, ವೀರಣ್ಣ, ಚಿದಂಬರಂ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಖಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!