Thursday, March 28, 2024
spot_imgspot_img
spot_imgspot_img

ಬಿ.ಅಹ್ಮದ್ ಹಾಜಿ ತುಂಬೆ ನಿಧನ

- Advertisement -G L Acharya panikkar
- Advertisement -

ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನದ ವೇಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಹ್ಮದ್ ಹಾಜಿ ಅವರು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌ ಇಂದು ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಸಂಘ ಸಂಸ್ಥೆಗಳು, ಮಸೀದಿಗಳ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಇಂದು ಸಂಜೆ 3:30ರ ವೇಳೆಗೆ ತುಂಬೆ ಕಾಲೇಜಿನ ವಠಾರದಲ್ಲಿ ಜನಾಝ ನಮಾಝ್ ಗೆ ವ್ಯವಸ್ಥೆ ಮಾಡಲಾಗಿದೆ‌. ಬಳಿಕ ತುಂಬೆ ಜುಮಾ ಮಸೀದಿಯ ಆಧೀನದ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಲಿದೆ.ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!