Tuesday, July 1, 2025
spot_imgspot_img
spot_imgspot_img

ಬಿ.ಸಿ ರೋಡ್: (ಡಿ. 6) ಹಿಂ.ಜಾ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

- Advertisement -
- Advertisement -

ಬಿ.ಸಿ ರೋಡ್: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆಯು ಡಿ. 6ನೇ ಶುಕ್ರವಾರ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡ್ ನಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ 9 ರಿಂದ ನಾಗಶ್ರೀ ಮಿತ್ರ ವೃಂದ ಕಮ್ಮಾಜೆ ತೆಂಕಬೆಳ್ಳೂರು ಭಜನಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 11:00ಕ್ಕೆ ಸಭಾಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಸೇರಾ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ, ಬಂಟ್ವಾಳ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಖ್ಯಾತ ಯಕ್ಷಗಾನ ಕಲಾವಿದ ದಿನೇಶ್ ಕಾವಳಕಟ್ಟೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 12:00 ರಿಂದ 12:30ವರೆಗೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!