Sunday, June 29, 2025
spot_imgspot_img
spot_imgspot_img

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

- Advertisement -
- Advertisement -

ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇ ವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.

ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಸಿಎಂಗಳಾದ ಯಡಿಯೂರಪ್ಪ, ಡಿವಿ ಸದಾನಂದಗೌಡ, ಮಾಜಿ ಡಿಸಿಎಂ ಈಶ್ವರಪ್ಪ, ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಬಿ.ವೈ.ವಿಜಯೇಂದ್ರ ಅವರಿಗೆ ನಳೀನ್ ಕುಮಾರ್ ಕಟೀಲ್‌ ಅವರು ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

- Advertisement -

Related news

error: Content is protected !!