Thursday, October 10, 2024
spot_imgspot_img
spot_imgspot_img

ಬಾಂಗ್ಲಾದ ಕ್ರಿಕೆಟ್ ಆಟಗಾರ ಶಾಕಿಬ್ ಅಲ್ ಹಸನ್ ವಿರುದ್ಧ ಕೊಲೆ ಪ್ರಕರಣ ದಾಖಲು

- Advertisement -
- Advertisement -

ಬಾಂಗ್ಲಾದೇಶದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಾಂಗ್ಲಾದ ಕ್ರಕೆಟ್‌ ತಂಡದ ಆಲ್ ರೌಂಡರ್ ಆಟಗಾರ ಶಕೀಬ್ ಅಲ್ ಹಸನ್ ವಿರುದ್ಧ ದೂರು ದಾಖಲಾಗಿದೆ. ರುಬೆಲ್ ಇಸ್ಲಾಂ ಹತ್ಯೆಯಲ್ಲಿ ಶಕೀಬ್ ಅಲ್ ಹಸನ್ (37) ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಇದಾದ ಬಳಿಕ ಪೊಲೀಸರು ಶಕೀಬ್ ವಿರುದ್ಧ ಎಫ್‌ಐಆರ್ ಸಹ ದಾಖಲಿಸಿದ್ದಾರೆ.

ಅಡಾಬೋರ್ನರಿಂಗ್ ರೋಡ್ ನಲ್ಲಿ ನಡೆದಿದ್ದ ರ್ಯಾಲಿಯೊಂದರಲ್ಲಿ ರುಬೆಲ್ ಭಾಗವಹಿಸಿದ್ದರು. ಅಲ್ಲಿ ಅವರ ಎದೆ ಹಾಗೂ ಹೊಟ್ಟೆಗೆ ಗುಂಡು ಹಾರಿಸಲಾಗಿತ್ತು ಎಂದು ವರದಿ ತಿಳಿಸಿದೆ. ಘಟನೆಯ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಆಗಸ್ಟ್ 7ರಂದು ಮೃತಪಟ್ಟಿದ್ದಾರೆ. ಢಾಕಾದ ಅಡಾಬೋರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಾಕೀಬ್ ರನ್ನು 28ನೇ ಆರೋಪಿ ಎಂದು ಹೆಸರಿಸಲಾಗಿದೆ. ಬಾಂಗ್ಲಾದೇಶದ ಜನಪ್ರಿಯ ನಟ ಫಿರ್ದೌಸ್ ಅಹ್ಮದ್ 55ನೇ ಆರೋಪಿಯಾಗಿದ್ದಾರೆ.

- Advertisement -

Related news

error: Content is protected !!