Friday, June 27, 2025
spot_imgspot_img
spot_imgspot_img

ಬಾಬಾ ಸಿದ್ದಿಕಿ ಪುತ್ರ ಅಜಿತ್ ಪವಾರ್ ತಂಡಕ್ಕೆ ಸೇರ್ಪಡೆ

- Advertisement -
- Advertisement -

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ.

ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಸಿದ್ದೀಕಿ ಸ್ಪರ್ಧಿಸಲಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದಿಕಿ ಅವರನ್ನು ಕಳೆದ ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು

2019 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈಗ ಪುನಃ ಅದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಠಿಣ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನೀಲ್ ತಟ್ಟರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ಬಾಂದ್ರಾ ಪೂರ್ವದಿಂದ ನಾಮನಿರ್ದೇಶನಗೊಂಡಿದ್ದೇನೆ. ಪ್ರೀತಿಯಿಂದ ಮತ್ತು ಎಲ್ಲ ಜನರ ಬೆಂಬಲದಿಂದ ನಾನು ಖಂಡಿತವಾಗಿಯೂ ಮತ್ತೊಮ್ಮೆ ಗೆಲ್ಲುತ್ತೇನೆ” ಎಂದು ಜೀಶನ್ ಸಿದ್ದೀಕಿ ತಿಳಿಸಿದ್ದಾರೆ.

- Advertisement -

Related news

error: Content is protected !!