Saturday, June 20, 2026
spot_imgspot_img
spot_imgspot_img

ನೀರಿನಲ್ಲಿ ಮುಳುಗಿ 3 ವರ್ಷದ ಮಗು ಮೃತ್ಯು..!

- Advertisement -
- Advertisement -

ತಾಯಿ ಇಟ್ಟಿಗೆ ತಯಾರು ಮಾಡುವ ಕೆಲಸದಲ್ಲಿ ನಿರತರಾಗಿದ್ದಾಗ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗುವೊಂದು ಇಟ್ಟಿಗೆ ತಯಾರಿಕೆಗೆ ಶೇಖರಿಸಲು ಇಟ್ಟ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ.

ಇಂದೂರ ಗ್ರಾಮದ 3 ವರ್ಷದ ಮಾನ್ವಿತ ಮಲ್ಲಿಕಾರ್ಜುನ ಹೊಸೂರ ನೀರಿನಲ್ಲಿ ಮುಳುಗಿ ಮೃತಪಟ್ಟ ಮಗು.

ತಾಯಿಯು ಇಟ್ಟಿಗೆ ಕೆಲಸಕ್ಕೆ ಹೋದಾಗ ಮಗುವನ್ನೂ ತನ್ನ ಜೊತೆ ಕರೆದುಕೊಂಡು ಹೋಗಿದ್ದಾಳೆ. ತಾಯಿ ತನ್ನ ಕೆಲಸದಲ್ಲಿ ನಿರತರಾಗಿದ್ದಾಗ ಮಗು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾಳೆ. ಕೂಡಲೇ ಮಗುವನ್ನು ಮುಂಡಗೋಡ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಾಗಲೇ ಮಗು ಕೊನೆಯುಸಿರೆಳೆದಿದೆ ಎನ್ನಲಾಗಿದೆ. ಆದರೂ, ಆಸ್ಪತ್ರೆಯ ಸಿಬ್ಬಂದಿ ಮಗುವನ್ನು ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿಕೊಟ್ಟಿದ್ದಾರೆ. ಸತ್ತ ಮಗುವನ್ನು ಹುಬ್ಬಳ್ಳಿ ಕಿಮ್ಸ್ ಗೆ ಒಯ್ದಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!