Saturday, June 28, 2025
spot_imgspot_img
spot_imgspot_img

ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನ; ಬಿರುವೆರ್ ಕುಡ್ಲ ಸಂಘಟನೆಯಿಂದ ದೂರು

- Advertisement -
- Advertisement -

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ಮುಂಖಂಡ ಬಿ.ಜನಾರ್ದನ ಪೂಜಾರಿ ಅವರ ಕುರಿತು ಫೇಸ್ ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿ ವಿಕೃತಿ ಮೆರೆದ ಘಟನೆ ನಡೆದಿದೆ. ಕರಾವಳಿ ರಶೀದ್ ಟಿಪ್ಪು ಎಂಬ ಖಾತೆಯಿಂದ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಶೀದ್ ಟಿಪ್ಪು ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಜನಾರ್ದನ ಪೂಜಾರಿಯವರು, “ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಈತನನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಈ ತರಹ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿ ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ವಜಾಗೊಳಿಸುತ್ತಿತ್ತು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಸಿದ್ಧಾಂತ ನಿಲ್ಲಿಸಿ” ಎಂದು ಬರೆಯಲಾಗಿದೆ.

ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

- Advertisement -

Related news

error: Content is protected !!