Thursday, June 18, 2026
spot_imgspot_img
spot_imgspot_img

ಬದಿಯಡ್ಕ: ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ; ಬಾಲಕ ಸಾವು!

- Advertisement -
- Advertisement -

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಬಾಲಕನೋರ್ವ ಮೃತಪಟ್ಟ ಘಟನೆ ನಿನ್ನೆಸಂಜೆ ಬದಿಯಡ್ಕದಲ್ಲಿ ನಡೆದಿದೆ.

ಬದಿಯಡ್ಕ ಪೆರಡಾಲದ ಅಬ್ದುಲ್ ಶಾಹಿಲ್ (16) ಮೃತಪಟ್ಟ ಬಾಲಕ. ಸ್ಕೂಟರ್ ಚಲಾಯಿಸುತ್ತಿದ್ದ ಮೂಕಂಪಾರೆಯ ಅಬ್ದುಸ್ಸಮದ್ (19) ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬದಿಯಡ್ಕ ಸರ್ಕಲ್ ನಲ್ಲಿ ಈ ಅಪಘಾತ ಸಂಭವಿಸಿದೆ.

ಉಕ್ಕಿನಡ್ಕ ವೈದ್ಯಕೀಯ ಕಾಲೇಜಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರರಿಬ್ಬರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಹಿಲ್ ಕೊನೆಯುಸಿರೆಳೆದಿದ್ದಾರೆ. ಅಬ್ದುಸ್ಸಮದ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!