Sunday, July 26, 2026
spot_imgspot_img
spot_imgspot_img

ಬಾಗಲಕೋಟೆ: ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆ ಮೇಲೆ ಅತ್ಯಾಚಾರ

- Advertisement -
- Advertisement -

ಬಾಗಲಕೋಟೆ: ನಗರದ ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಿ-ದರ್ಜೆ ನೌಕರ ಫರೀದ್ ಸಾಬ್ ಡಾಂಗಿ ಈ ಕೃತ್ಯವೆಸಗಿದ ಆರೋಪಿ. ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರ ಸಹೋದರಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. 34 ವರ್ಷದ ಸಂತ್ರಸ್ತೆ ತನ್ನ ಅನಾರೋಗ್ಯ ಪೀಡಿತ ಸಹೋದರನ ಆರೈಕೆಗಾಗಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಳು. ಈ ವೇಳೆ ಫರೀದ್ ಸಾಬ್ ಮಹಿಳೆಯ ಪರಿಚಯ ಮಾಡಿಕೊಂಡಿದ್ದ. ಮೇ 4ರ ಮಧ್ಯರಾತ್ರಿ 12 ರಿಂದ 2 ಗಂಟೆಯ ಸುಮಾರಿಗೆ ಆಕೆಗೆ ಬೆದರಿಕೆ ಹಾಕಿ ಡಿ-ದರ್ಜೆ ಸಿಬ್ಬಂದಿಯ ಬಾತ್‌ರೂಮ್‌ನಲ್ಲಿ ಅತ್ಯಾಚಾರ ಮಾಡಿದ್ದಾನೆ. ಕೃತ್ಯದ ನಂತರ ಆರೋಪಿ ಮಹಿಳೆಯನ್ನು ಒಳಗಡೆ ಲಾಕ್ ಮಾಡಿ ಕೆಲಸಕ್ಕೆ ತೆರಳಿದ್ದ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಿಎನ್‌ಎಸ್ 127(2)352, 351(2)64, 64(2)(ಇ) ಅಡಿ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಹಿನ್ನೆಲೆ ಜಿಲ್ಲಾಸ್ಪತ್ರೆಯ ಸರ್ಜನ್ ಮಹೇಶ್ ಕೋಣಿ ಅವರು ಆರೋಪಿ ಫರೀದ್ ಸಾಬ್‌ನನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿದ್ದಾರೆ. ಜಿಲ್ಲಾಸ್ಪತ್ರೆ ಅಂದರೆ ಬಡವರಿಗೆ ದೇವಸ್ಥಾನ ಇದ್ದ ಹಾಗೆ. ಆದರೆ, ಜಿಲ್ಲಾಸ್ಪತ್ರೆಯಲ್ಲೇ ಮಹಿಳೆಯರಿಗೆ ರಕ್ಷಣೆಯಿಲ್ಲ. ಇವರು ಅದನ್ನು ಲಾಡ್ಜ್ ತರಹ ಮಾಡಿದ್ದಾರೆ ಎಂದು ಸಂತ್ರಸ್ತೆಯ ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!